ಕರ್ನಾಟಕ

karnataka

ETV Bharat / city

ಕೊರೊನಾ ಕಾವು: ಶಿವಮೊಗ್ಗ ಪಾಲಿಕೆಯಿಂದ ಮುಂಜಾಗ್ರತಾ ಕ್ರಮ - ಕೊರೊನಾ ವೈರಸ್​ ಚಿಕಿತ್ಸೆ

ರಾಜ್ಯದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶಿವಮೊಗ್ಗ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

corona-virus-awareness-meeting-in-shivamogga
ಆಯುಕ್ತ ಚಿದಾನಂದ ವಟಾರೆ

By

Published : Mar 20, 2020, 7:47 PM IST

ಶಿವಮೊಗ್ಗ:ಕರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ಪಾಲಿಕೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಎಲ್ಲಾ ಶಾಪಿಂಗ್ ಮಾಲ್, ಪಬ್, ಕ್ಲಬ್, ಜಿಮ್, ಈಜುಕೊಳಗಳು, ಚಲನಚಿತ್ರ ಮಂದಿರಗಳು, ಮಾಂಸ ಮಾರಾಟ ಮಳಿಗೆಳನ್ನು ಮುಚ್ಚಿಸಲು ಕ್ರಮ ವಹಿಸಲಾಗಿದೆ. ಮದುವೆ, ಜಾತ್ರೆ, ಸಂತೆ, ವಸ್ತು ಪ್ರದರ್ಶನ, ಸಂಗೀತ ಹಬ್ಬಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಶಿವಮೊಗ್ಗದಲ್ಲಿ ಮುಂಜಾಗ್ರತೆ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳಗೊಂಡ ತಂಡಗಳನ್ನು ರಚಿಸಲಾಗಿದೆ ಎಂದರು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 104 ಜತೆಗೆ 080-66692000, 080-46848600ಕ್ಕೆ ಸಂಪರ್ಕಿಸಬಹುದಾಗಿದೆ.

ABOUT THE AUTHOR

...view details