ಶಿವಮೊಗ್ಗ:ಮತದಾನದ ಬಗ್ಗೆ ಅರಿವು ಹಾಗೂ ಜಿಲ್ಲೆಯಲ್ಲಿ ಮತದಾನ ಹೆಚ್ಚು ಮಾಡಲು ಜಿಲ್ಲಾಡಳಿತ ವಿಶೇಷ ಪ್ರಯತಕ್ಕೆ ಕೈ ಹಾಕಿದ್ದು, ಸ್ವೀಪ್ ಸಮಿತಿ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ಚುನಾವಣಾ ಆಯೋಗ ಮತದಾನದ ಪ್ರಮಾಣವನ್ನು ಹೆಚ್ಚಿಸಲು ನೋಟಾ ಜಾರಿಗೆ ತಂದಿದ್ದರೂ ಸಹ ಮತ ಪ್ರಮಾಣ ನಿರೀಕ್ಷಿಸಿದಷ್ಟು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ಅವರು ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಕಾರ್ಯಕ್ರಮ ನಡೆಸುತ್ತಿದ್ದು, ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡುವ ಹಾಗೂ ಮತದಾನದ ಮಹತ್ವ ತಿಳಿಸುವ ಮೂಲಕ ಜಾಗೃತಿ ಮಾಡುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ನಗರದ ಪ್ರದೇಶಗಳಲ್ಲಿ ಕಡಿಮೆ ಮಟ್ಟದಲ್ಲಿ ಮತದಾನ ಆಗುತ್ತಿದೆ. ಹಾಗಾಗಿ ಈ ಬಾರಿ ನಗರ ಪ್ರದೇಶವನ್ನು ಹೆಚ್ಚು ಗುರಿಯಾಗಿಟ್ಟುಕೊಂಡು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಒಂದು ಕಾರ್ಯಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿದ್ದು, ಮನೆ ಮನೆಗಳಿಗೆ ತೆರಳಿ ಮತದಾನದ ದಿನಾಂಕ, ಅದರ ಮಹತ್ವ, ತಪ್ಪದೆ ಮತದಾನ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗುತ್ತಿದೆ.