ಶಿವಮೊಗ್ಗ:ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ, ಡಿಸಿಸಿ ಸಭೆ ನಡೆಸಿದರು.
ಶಿವಮೊಗ್ಗದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆ - ಶಿವಮೊಗ್ಗದಲ್ಲಿ ಬ್ಯಾಂಕ್ ಅಧಿಕಾರಿಗಳೊಂದಿಗೆ ಡಿಸಿಸಿ ಸಭೆ
ಸರ್ಕಾರದ ಸಬ್ಸಿಡಿ ಹಣವನ್ನು ಬ್ಯಾಂಕ್ಗಳು ಸಾಲದ ಖಾತೆಗೆ ಜಮಾಯಿಸದೇ ಫಲಾನುಭವಿಗಳಿಗೆ ನೀಡಬೇಕು ಎಂದು ಶಿವಮೊಗ್ಗದಲ್ಲಿ ನಡೆದ ಡಿಸಿಸಿ ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಕೇಂದ್ರ ಸರ್ಕಾರದ ಎಲ್ಲ ಜನಪರ ಯೋಜನೆಗಳನ್ನು ಯಾವುದೇ ತಾರತಮ್ಯವಿಲ್ಲದೆ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸವಾಗಬೇಕು. ಸರ್ಕಾರದ ಸಬ್ಸಿಡಿ ಹಣವನ್ನು ಬ್ಯಾಂಕ್ಗಳು ಸಾಲದ ಖಾತೆಗೆ ಜಮಾಯಿಸದೇ ಫಲಾನುಭವಿಗಳಿಗೆ ನೀಡಬೇಕು ಎಂದು ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಬ್ಯಾಂಕ್ನಲ್ಲಿ ನೆರೆ ಸಂಬಂಧಿಸಿದ ಹಣವಾಗಲಿ, ನರೇಗಾ ಯೋಜನೆಯ ಹಣವಾಗಲಿ ಅಥವಾ ಸರ್ಕಾರದ ಯೋಜನೆಗಳಿಂದ ಬಂದ ಯಾವುದೇ ಹಣವನ್ನು ಬ್ಯಾಂಕ್ಗಳು ಬಾಕಿ ಖಾತೆಗೆ ಜಮಾಸಿಕೊಂಡಿರುವ ಪ್ರಕರಣಗಳು ಕಂಡು ಬಂದರೆ ಅಂತಹ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ಕೆ.ಬಿ.ಶಿವಕುಮಾರ್ ಎಚ್ಚರಿಕೆ ನೀಡಿದರು.