ಶಿವಮೊಗ್ಗ: ಸಾಗರ ಹೊರವಲಯದ ಯಲಗಳಲೆ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಸಾಗರದ ಯಲಗಳಲೆ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ - ಸಾಗರ ಅರಣ್ಯದಲ್ಲಿ ವ್ಯಕ್ತಿಯ ಶವ ಪತ್ತೆ
ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಶಿವಮೊಗ್ಗ ಜಿಲ್ಲೆಯ ಸಾಗರ ಹೊರವಲಯದ ಯಲಗಳಲೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಶವ ಪತ್ತೆ
ಸುಮಾರು 55 ವರ್ಷದ ವ್ಯಕ್ತಿಯ ಶವ ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕಾಲು ನೆಲಕ್ಕೆ ತಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಶವ ಕೊಳೆತ ಸ್ಥಿತಿಗೆ ತಲುಪಿದ್ದು, ನಾಲ್ಕೈದು ದಿನದ ಹಿಂದೆ ಘಟನೆ ನಡೆದಿರಬಹುದು ಎನ್ನಲಾಗಿದೆ.
ಅರಣ್ಯ ಪ್ರದೇಶ ಹಾಗೂ ಮಳೆಯ ಕಾರಣ ಯಾರೂ ಅತ್ತ ಹೋಗದ ಕಾರಣ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಎಸ್ಐ ಭರತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಶವದ ಗುರುತು ಇನ್ನೂ ಪತ್ತೆಯಾಗಿಲ್ಲ.