ಶಿವಮೊಗ್ಗ: ಭದ್ರಾವತಿಯಲ್ಲಿ ಯುವಕನೊಬ್ಬನ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಮುಬಾರಕ್ನಿಂದ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಯುವಕ ಸುನೀಲ್ ಎಂದು ಗುರುತಿಸಲಾಗಿದ್ದು, ಭದ್ರಾವತಿಯ ನೆಹರು ನಗರದ ನಿವಾಸಿಯಾಗಿದ್ದಾನೆ. ಇವರು ಇಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗುವಾಗ ಅದೇ ಬಡಾವಣೆಯ ಡಿಚ್ಚಿ ಮುಬಾರಕ್ ಏಕಾಏಕಿ ಸುನೀಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದಾಗಿ ಸುನೀಲ್ನ ಮೂಗಿನ ಮೂಳೆ ಮುರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಸುನೀಲ್ನನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ 101/2022 ಕಲಂ 341, 323 ರಂತೆ ಪ್ರಕರಣ ದಾಖಲಾಗಿದೆ.