ಕರ್ನಾಟಕ

karnataka

ETV Bharat / city

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಬಹುತೇಕ ಅಂತಿಮ: ಡಾ.ಶಾಲಿನಿ ರಜನೀಶ್ - 1950 ಸಂಖ್ಯೆಗೆ ಕರೆ ಮಾಡಿ ಖಾತ್ರಿಪಡಿಸಿಕೊಳ್ಳ ಬೇಕು

ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದ್ದು, ಕರಡು ಮತದಾರರ ಪಟ್ಟಿಯನ್ನು ಸಧ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಾಲಿನಿ ರಜನೀಶ್ ತಿಳಿಸಿದರು.

KN_SMG_01_Dr_shalini_rajanish_AvB_KA10011
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ: ಡಾ.ಶಾಲಿನಿ ರಜನೀಶ್

By

Published : Dec 6, 2019, 5:28 PM IST

ಶಿವಮೊಗ್ಗ:ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದ್ದು, ಕರಡು ಮತದಾರರ ಪಟ್ಟಿಯನ್ನು ಸಧ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ: ಡಾ.ಶಾಲಿನಿ ರಜನೀಶ್
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಉತ್ತಮ ರೀತಿಯಲ್ಲಿ ನಡೆದಿದೆ. ಪ್ರಸ್ತುತ 14,410,66 ಮತದಾರರು ಹೆಸರು ನೋಂದಾಯಿಸಿದ್ದು, ಹಿಂದಿನ ಮತದಾರರ ಪಟ್ಟಿಗಿಂತ ಶೇ.3ರಷ್ಟು ಮತದಾರರ ನೋಂದಣಿಯಲ್ಲಿ ಹೆಚ್ಚಳ ಉಂಟಾಗಿದೆ. ಪರಿಷ್ಕರಣೆ ಅವಧಿಯಲ್ಲಿ ಸ್ವೀಕರಿಸಲಾಗಿರುವ 23,470 ಅರ್ಜಿಗಳನ್ನು ವಿಲೇವಾರಿ ಮಾಡಲು ಬಾಕಿ ಇದ್ದು, ಆದಷ್ಟು ಬೇಗನೆ ವಿಲೇವಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು. 1950 ಕರೆ ಮಾಡಿ: ಮತದಾರರು ಚುನಾವಣೆ ದಿನದವರೆಗೆ ಕಾಯದೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು. 6 ತಿಂಗಳಿಗಿಂತ ಅಧಿಕ ಕಾಲ ನೀಡಿರುವ ವಿಳಾಸದಲ್ಲಿ ವಾಸ್ತವ್ಯ ಇಲ್ಲದಿದ್ದರೆ ಮತದಾರರ ಪಟ್ಟಿಯಿಂದ ಅಂತಹ ಹೆಸರು ತೆಗೆದು ಹಾಕುವ ಸಾಧ್ಯತೆಯಿದ್ದು, ಅಂತಹವರು ಸಹ ಪರಿಶೀಲನೆ ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

For All Latest Updates

TAGGED:

ABOUT THE AUTHOR

...view details