ಶಿವಮೊಗ್ಗ: ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕಾಗಿ ಖದೀಮರು ಬೇಡಿಕೆ ಇಡುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ಮರುಕಳಿಸುತ್ತಿವೆ. ಇಂತಹ ಪ್ರಕರಣಗಳಲ್ಲಿ ಸಾಕಷ್ಟು ಜನ ಕೂಡ ಆನ್ಲೈನ್ ಮೂಲಕ ಹಣ ನೀಡಿ ಮೋಸ ಹೋಗಿದ್ದಾರೆ. ಇದೀಗ ಎಂಎಲ್ಸಿ ಆಯನೂರು ಮಂಜುನಾಥ್ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಎಂಎಲ್ಸಿ ಆಯನೂರು ಮಂಜುನಾಥ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ ಖದೀಮರು! - ನಕಲಿ ಪೇಜ್ ಕ್ರಿಯೇಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಖದೀಮರು
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಅಕೌಂಟ್ ಕ್ರಿಯೇಟ್ ಮಾಡಿ, ಹಣಕ್ಕೆ ಬೇಡಿಕೆ ಇಡಲಾಗಿದೆ.
ಹೌದು, ಆಯನೂರು ಮಂಜುನಾಥ್ ಅವರ ಫೋಟೋ ಸಮೇತ ನಕಲಿ ಅಕೌಂಟ್ ಕ್ರಿಯೇಟ್ ಮಾಡಲಾಗಿದೆ. ನಕಲಿ ಅಕೌಂಟ್ ಕ್ರಿಯೇಟ್ ಮಾಡಿದ ಖದೀಮರು, ಫೇಸ್ಬುಕ್ನಲ್ಲಿ ಆಯನೂರು ಮಂಜುನಾಥ್ ಅವರ ಸ್ನೇಹಿತರಿಗೆ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಆಯನೂರು ಮಂಜುನಾಥ್ ಅವರ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ವಿಧಾನ ಪರಿಷತ್ ಸದಸ್ಯರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಪೇಜ್ ಕ್ರಿಯೇಟ್ ಮಾಡಲಾಗಿದೆ. ದಯವಿಟ್ಟು ಯಾರು ಹಣ ನೀಡಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಈ ರೀತಿ ನಕಲಿ ಪೇಜ್ ಕ್ರಿಯೇಟ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಹಾಗೂ ಹಣ ಪಡೆದು ಮೋಸ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಸೈಬರ್ ಕ್ರೈಂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.