ಶಿವಮೊಗ್ಗ: ರೈತ ಸಂಘಟನೆಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಪಾಳಮೋಕ್ಷ ಮಾಡಿದೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು.
ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕಪಾಳಮೋಕ್ಷ ಮಾಡಿದೆ: ಹೆಚ್.ಆರ್. ಬಸವರಾಜಪ್ಪ
ದೇಶದಲ್ಲಿ ರೈತ ಸಂಘಟನೆಗಳು ಕಳೆದ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದು, ಅವರ ಬೆಂಬಲಕ್ಕೆ ಸುಪ್ರೀಂಕೋರ್ಟ್ ನಿಂತಿರುವುದು ರೈತರಿಗೆ ಸಿಕ್ಕ ಜಯ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಶಿವಮೊಗ್ಗದಲ್ಲಿ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ರೈತ ಸಂಘಟನೆಗಳು ಕಳೆದ ಒಂದು ತಿಂಗಳಿಂದ ಹೋರಾಟ ಮಾಡುತ್ತಿದ್ದು, ಅವರ ಬೆಂಬಲಕ್ಕೆ ಸುಪ್ರೀಂ ಕೋರ್ಟ್ ನಿಂತಿರುವುದು ರೈತರಿಗೆ ಸಿಕ್ಕ ಜಯ. ಕೇಂದ್ರ ಸರ್ಕಾರ ಇನ್ನಾದರೂ ಜನರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಅರಿತು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದರು.
ಇನ್ನು ಸುಪ್ರೀಂಕೋರ್ಟ್ ಕೂಡ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕಾಯ್ದೆಗಳ ಕುರಿತು ಸಮಿತಿ ರಚನೆ ಮಾಡಿ, ಸಾಧಕ - ಬಾಧಕಗಳನ್ನು ಚರ್ಚಿಸುವಂತೆ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಕಾರ್ಯೋನ್ಮುಖವಾಗಬೇಕು ಎಂದು ಹೆಚ್.ಆರ್.ಬಸವರಾಜಪ್ಪ ಒತ್ತಾಯಿಸಿದರು.