ಶಿವಮೊಗ್ಗ: ಚುನಾವಣಾ ಕರ್ತವ್ಯ ಲೋಪ ಎಸಗಿದ ಮೂರು ಸಿಬ್ಬಂದಿಯನ್ನ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಚೆಕ್ ಪೋಸ್ಟ್ನಲ್ಲಿ ನಿದ್ದೆ ಮಾಡಿದ ಸಿಬ್ಬಂದಿಗೆ ಅಮಾನತು ಶಿಕ್ಷೆ! - undefined
ಚುನಾವಣಾ ಕರ್ತವ್ಯ ಲೋಪ ಎಸಗಿದ ಮೂರು ಸಿಬ್ಬಂದಿ ಅಮಾನತು - ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ಆದೇಶ. ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ಮಾಡದೇ ನಿದ್ರೆಗೆ ಜಾರಿದ್ದ ಸಿಬ್ಬಂದಿ.
ಜಿಲ್ಲೆಯ ಶಿಕಾರಿಪುರ ತಾಲೂಕಿನ ಖವಾಸಪುರದ ಚೆಕ್ ಪೋಸ್ಟ್ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಶಿಕಾರಿಪುರದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಶೋಕ ರಾಜು ಬಿ.ಎ, ಮುದ್ದೇನಹಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಮಂಜಪ್ಪ.ಬಿ.ಸಿ ಹಾಗೂ ಸಿಆರ್ಪಿ ಬೇಗೂರು ಗ್ರಾಮದ ಚನ್ನೇಶ ಡಿ.ಬಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಮೂವರೂ ಸರ್ಕಾರಿ ನೌಕರರಾಗಿದ್ದು, ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ಮಾಡದೆ ಮಲಗಿದ್ದರು. ಜಿಲ್ಲೆಯ ಪ್ರತಿ ಚೆಕ್ ಪೋಸ್ಟ್ಗಳ ಕಾರ್ಯ ನಿರ್ವಹಣೆಯ ಬಗ್ಗೆ ಜಿಲ್ಲಾಧಿಕಾರಿ ತಮ್ಮ ಮೊಬೈಲ್ನಲ್ಲಿ ವೀಕ್ಷಣೆ ಮಾಡಿ, ಅವರಿಗೆ ಕರೆ ಮಾಡಿ ಎಚ್ಚರಿಸಿದ್ದರು. ಆದರೂ ಸಹ ಮಲಗಿ, ಕರ್ತವ್ಯ ಲೋಪವೆಸಗಿದ್ದಾರೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಅಡಿ ಮೂವರನ್ನು ಅಮಾನತು ಮಾಡಲಾಗಿದೆ.