ಶಿವಮೊಗ್ಗ: ಕೊರೊನಾ ತಡೆಗಟ್ಟಲು ವಿಧಿಸಿರುವ ಲಾಕ್ಡೌನ್ಗೆ ಜಿಲ್ಲೆಯಲ್ಲಿ ಮೊದಲ ದಿನ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ರೋಗಿಗಳ ಕುಟುಂಬಕ್ಕೆ ಕೋವಿಡ್ ಸುರಕ್ಷಾ ಪಡೆ, ಸೇವಾ ಭಾರತಿ, ಗಾಂಧಿ ಬಜಾರ್ ದಿನಸಿ ವರ್ತಕರ ಸಂಘದ ವತಿಯಿಂದ ಹದಿನೈದು ದಿನಗಳ ಕಾಲ ಬೆಳಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.