ಶಿವಮೊಗ್ಗ: ಲಾಕ್ಡೌನ್ನಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಿಸಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ - Shimoga Metropolitan food items Distribution
ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಲಾಕ್ಡೌನ್ ಜಾರಿಯಲ್ಲಿದೆ. ಹಾಗಾಗಿ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಮಹಾನಗರ ಪಾಲಿಕೆ ವತಿಯಿಂದ 40 ಸಾವಿರ ದಿನಸಿ ಕಿಟ್ಗಳನ್ನು ವಿತರಿಸಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ವತಿಯಿಂದ 40 ಸಾವಿರ ಆಹಾರ ಸಾಮಗ್ರಿಗಳ ಕಿಟ್ಗಳನ್ನು ಪ್ರತಿ ವಾರ್ಡ್ಗೆ ಒಂದು ಸಾವಿರದಂತೆ ಹಂಚಿಕೆ ಮಾಡಲಾಗುತ್ತಿದೆ. ಮೊದಲನೇ ಹಂತದಲ್ಲಿ 25 ಸಾವಿರ ಕಿಟ್ಗಳು ಹಾಗೂ 2ನೇ ಹಂತದಲ್ಲಿ 15 ಸಾವಿರ ಆಹಾರ ಸಾಮಗ್ರಿಗಳ ಕಿಟ್ಗಳನ್ನು ನೀಡಲಾಗುತ್ತಿದೆ.