ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ಜೋರಾಗಿದೆ. ಒಂದೆಡೆ ಸರ್ಕಾರ ಕಾಯ್ದೆ ಜಾರಿಗೆ ಸಜ್ಜಾಗಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಮಧ್ಯೆ ನೂರಕ್ಕೆನೂರರಷ್ಟು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಪಥ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕುರಿತು ತಮ್ಮ ದೃಢವಾದ ನಿಲುವನ್ನು ರಾಜ್ಯದ ಜನರಿಗೆ ತಿಳಿಸಿದ್ದಾರೆ.
B S Yediyurappa reaction on Belagavi riot: ಬೆಳಗಾವಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಈ ರೀತಿಯ ಗಲಭೆ ಮಾಡುವ ಪ್ರಯತ್ನ ಮತ್ತು ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ವಿಧಾನ ಮಂಡಲದಲ್ಲಿ ಸುದೀರ್ಘ ಚರ್ಚೆ ಮಾಡಿ ಈಗಾಗಲೇ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹ ಸಚಿವರಿಗೆ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸಿಸುವ ಕೆಲಸವಾಗಲಿದೆ ಎಂದು ಬಿಎಸ್ವೈ ಖಡಕ್ ಆಗಿ ಹೇಳಿದ್ರು.