ಕರ್ನಾಟಕ

karnataka

ETV Bharat / city

ಕೆ.ಎಸ್‌ ಈಶ್ವರಪ್ಪ, ಆರಗ ಜ್ಞಾನೇಂದ್ರಗೆ ಶಿವಮೊಗ್ಗ ಜನತೆಯಿಂದ ಸನ್ಮಾನ - ಸಚಿವ ಆರಗ ಜ್ಞಾನೇಂದ್ರ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ನೂತನವಾಗಿ ಸಚಿವರಾದ ನಂತರ ಜಿಲ್ಲೆಗೆ ಆಗಮಿಸಿದ ಕೆ.ಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ಶಿವಮೊಗ್ಗದ ಜನತೆ ಭವ್ಯ ಸ್ವಾಗತ ಕೋರಿದರು.

new ministers
ಕೆ.ಎಸ್ ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ

By

Published : Aug 6, 2021, 6:48 AM IST

ಶಿವಮೊಗ್ಗ: ಸಚಿವರಾದ ಮೇಲೆ ಮೊದಲ ಬಾರಿಗೆ ತೀರ್ಥಹಳ್ಳಿಗೆ ಆಗಮಿಸಿದ ಆರಗ ಜ್ಞಾನೇಂದ್ರ ಅವರಿಗೆ ಮಳೆ ಲೆಕ್ಕಿಸದೆ ತೀರ್ಥಹಳ್ಳಿ ಜನತೆ ಭವ್ಯ ಸ್ವಾಗತ ಕೋರಿದ್ದಾರೆ.‌

ತೀರ್ಥಹಳ್ಳಿ ಪಟ್ಟಣದ ಹೊರಭಾಗದಿಂದ ಸಚಿವರನ್ನು ಡಿಜೆ ಡ್ಯಾನ್ಸ್ ಮೂಲಕ ಮೆರವಣಿಗೆ ಮಾಡಿಕೊಂಡು ಕರೆತಂದರು. ನಂತರ ನಡೆದ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಜ್ಞಾನೇಂದ್ರ ಅಭಿಮಾನಿಗಳು ಭಾಗವಹಿಸಿದ್ದರು.

ನೂತನ ಸಚಿವರನ್ನು ಅದ್ದೂರಿಯಾಗಿ ಸ್ವಾಗತಿಸಿದ ಶಿವಮೊಗ್ಗ ಜನತೆ

ನೂತನ ಸಚಿವರಿಗೆ ಸನ್ಮಾನ:

ನೂತನ ಸಚಿವರಾದ ಕೆ.ಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸನ್ಮಾನ ಮಾಡಲಾಯಿತು. ಶಿವಮೊಗ್ಗಕ್ಕೆ ಆಗಮಿಸಿದ ಕೆ.ಎಸ್ ಈಶ್ವರಪ್ಪ ಹಾಗೂ ಆರಗ ಜ್ಞಾನೇಂದ್ರ ಆರ್​ಎಸ್​ಎಸ್ ಕಚೇರಿಗೆ ಭೇಟಿ ನೀಡಿ ಪ್ರಮುಖರಿಗೆ ಧನ್ಯವಾದ ತಿಳಿಸಿದರು. ನಂತರ ಕೋಟೆ ರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಚಿವರಾದ ಕೆ.ಎಸ್ ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ

ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿದ ಇಬ್ಬರು ಸಚಿವರು ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಬಿಜೆಪಿ ಹಿರಿಯ ಮುಖಂಡ ಪದ್ಮನಾಭ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ABOUT THE AUTHOR

...view details