ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗ ದಳದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಯುಎಪಿಎ ಆ್ಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.
ಹರ್ಷ ಹತ್ಯೆ ಪ್ರಕರಣ..ಎನ್ಐಎ ತನಿಖೆ ಚುರುಕು..ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್?!
ಬಜರಂಗ ದಳದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ.
ಇದನ್ನೂ ಓದಿ:ಸ್ಕೂಟಿಯಲ್ಲಿ ಬರುತ್ತಿದ್ದಾಗಲೇ ಟ್ರಾನ್ಸ್ಫಾರ್ಮರ್ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು
ಎನ್ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ. ಕೊಲೆ ಆರೋಪಿಗಳ ಪೈಕಿ ಮೂರು ಜನ ಮೈಸೂರು, ನಾಲ್ವರು ಬಳ್ಳಾರಿ, ಉಳಿದ ಮೂವರನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಶಿವಮೊಗ್ಗ ಕೇಂದ್ರ ಕಾರಾಗೃಹ ತೀರ್ಮಾನಿಸಿತ್ತು. ಪ್ರಕರಣದ ತನಿಖೆಯನ್ನು ಎನ್ಐಎ ಆರಂಭಿಸಿರುವುದರಿಂದ ಇದೀಗ ಎಲ್ಲಾ ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಆಗಲಿದ್ದಾರೆ. ಈ ವರ್ಗಾವಣೆ ಪ್ರಕ್ರಿಯೆ ಮುಗಿದ ಬಳಿಕ ಎನ್ಐಎ ವಿಚಾರಣೆ ನಡೆಸಲಿದೆ.