ಶಿವಮೊಗ್ಗ:ಜಿಲ್ಲಾ ಕಾಂಗ್ರೆಸ್ ನಾಯಕರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಶಿವಮೊಗ್ಗದ ಖಾಸಗಿ ಹೋಟೆಲ್ನಲ್ಲಿ ಮಾತುಕತೆ ನಡೆಸಿದ್ದಾರೆ.
ಮಧು ಬಂಗಾರಪ್ಪ ಬೆಂಬಲಿಸಲು ಕೈ ನಾಯಕರೊಂದಿಗೆ ದೊಡ್ಡ ಗೌಡರ ಚರ್ಚೆ - ಶಿವಮೊಗ್ಗ
ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವಿಗೆ ಕಾಂಗ್ರೆಸ್ ನಾಯಕರೊಂದಿಗೆ ಮಾಜಿ ಪ್ರಧಾನಿ ದೇವೇಗೌಡರು ಚರ್ಚೆ ನಡೆಸಿದ್ದಾರೆ.
ದೊಡ್ಡಗೌಡರ ಮಾತುಕತೆ
ಸುಮಾರು20 ನಿಮಿಷಗಳ ಕಾಲ ಮಾತುಕತೆ ನಡೆಸಿದ ದೊಡ್ಡಗೌಡರು, ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಗೆಲುವಿಗೆ ಕಾಂಗ್ರೆಸ್ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ, ಆರ್. ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಸೇರಿದಂತೆ ಹಲವು ನಾಯಕರು ಚರ್ಚೆಯಲ್ಲಿ ಪಾಲ್ಗೊಂಡರು.
ಕಾಗೋಡು ತಿಮ್ಮಪ್ಪ ಸೇರಿ ಕಾಂಗ್ರೆಸ್ ನಾಯಕರು ಕೈ ಕುಲುಕಿ ದೊಡ್ಡಗೌಡರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.