ಶಿವಮೊಗ್ಗ: ವಾಯುಭಾರ ಕುಸಿತದಿಂದ ಮಲೆನಾಡಲ್ಲಿ ನಿನ್ನೆಯಿಂದ ಮಳೆಗಾಲದ ಅನುಭವ ಉಂಟಾಗಿದೆ. ನಿನ್ನೆ ಸಂಜೆ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲಾದ್ಯಾಂತ ಭಾರಿ ಮಳೆ ಸುರಿದಿತ್ತು. ಇದರಿಂದ ಕೆಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ವಾಯುಭಾರ ಕುಸಿತ ಮಲೆನಾಡಲ್ಲಿ ವರುಣನ ಆರ್ಭಟ - shivamogga district rain news
ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ಭಾಗದಲ್ಲಿ ಮಧ್ಯಾಹ್ನದಿಂದಲೇ ಮಳೆಯ ಅರ್ಭಟ ಜೋರಾಗಿತು. ಇದರಿಂದ ಈ ಭಾಗದಲ್ಲಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಹವಾಮಾನ ಬದಲಾವಣೆಯಿಂದ ಜನರು ಅನಾರೋಗ್ಯದಿಂದ ಬಳಲುವಂತಾಗಿದೆ.
ಶಿವಮೊಗ್ಗ ಜಿಲ್ಲೆ
ಇಂದು ಸಹ ಮಧ್ಯಾಹ್ನದಿಂದಲೇ ಮಳೆ ಸುರಿಯಲು ಪ್ರಾರಂಭವಾಗಿದೆ. ಅದರಲ್ಲೂ ಹೊಸನಗರ, ತೀರ್ಥಹಳ್ಳಿ ಹಾಗೂ ಸಾಗರ ಭಾಗದಲ್ಲಿ ಮಧ್ಯಾಹ್ನದಿಂದಲೇ ಮಳೆಯ ಅರ್ಭಟ ಜೋರಾಗಿತ್ತು. ಇದರಿಂದ ಈ ಭಾಗದಲ್ಲಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಹವಾಮಾನ ಬದಲಾವಣೆಯಿಂದ ಜನರು ಅನಾರೋಗ್ಯದಿಂದ ಬಳಲುವಂತಾಗಿದೆ.