ಶಿವಮೊಗ್ಗ:ಕೇಸರಿ ಶಾಲು ಹಾಗೂ ಹಿಜಾಬ್ ವಿವಾದ ಶಿವಮೊಗ್ಗದಲ್ಲಿ ದಿನೇ ದಿನೇ ತಾರಕಕ್ಕೆ ಏರುತ್ತಿದೆ. ನಿನ್ನೆ ಕಾಲೇಜು ಆವರಣಗಳಿಗೆ ಸಿಮೀತವಾಗಿದ್ದ ವಿವಾದ ಇಂದು ರಸ್ತೆಗೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಚೇರಿಗೂ ತಲುಪಿದೆ. ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಇಂದು ಕೇಸರಿ ಶಾಲನ್ನು ಧರಿಸಿದ್ದ ವಿದ್ಯಾರ್ಥಿಗಳು ಡಿಸಿ ಕಚೇರಿಗೆ ತಲುಪಿ ಪ್ರತಿಭಟನೆ ನಡೆಸಿದರು. ಇತ್ತ ಹಿಜಾಬ್ ಬೆಂಬಲಿಸುವ ಗುಂಪು ಸಹ ಮೆರವಣಿಗೆ ಹೊರಡುವಾಗ ಪೊಲೀಸರು ತಡೆದರು.
ರಸ್ತೆಗಿಳಿದವರಿಗೆ ಪೊಲೀಸರ ಲಾಠಿ ರುಚಿ:ಬಾಪೂಜಿ ನಗರ ಕಾಲೇಜಿನಿಂದ ಬಿ.ಹೆಚ್. ರಸ್ತೆಯ ಮೂಲಕ ಮೆರವಣಿಗೆ ನಡೆಸಲು ಮುಂದಾದ ಗುಂಪಿಗೆ ಎಸ್ಪಿ ಲಕ್ಷ್ಮಿ ಪ್ರಸಾದ್ ರವರು ಮೆರವಣಿಗೆ ನಡೆಸುವುದು ಬೇಡ ಎಂದು ಹೇಳಿದ್ರು. ಕೇಳದೆ ಹೋದಾಗ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಇದರಿಂದ ಅರ್ಧ ಜನ ಓಡಿ ಹೋದರು.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ!