ಶಿವಮೊಗ್ಗ:ನಗರದಲ್ಲಿನಿನ್ನೆ ರಾತ್ರಿ ಹಿಂದುಪರ ಸಂಘಟನೆಯ ಯುವಕನ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ. ಶೀಘ್ರವೇ ಕೊಲೆಗಡುಕರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಲೆ ಪ್ರಕರಣವನ್ನು ಬೇಧಿಸಲು ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂದು ತನಿಖೆಯ ಮೂಲಕ ತಿಳಿಯಬೇಕಿದೆ ಎಂದರು.
ಶಿವಮೊಗ್ಗ ಕೊಲೆ ಪ್ರಕರಣ: ಗೃಹ ಸಚಿವರ ಹೇಳಿಕೆ ಮೃತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಕುಟುಂಬಸ್ಥರು ಕೊಲೆಗಾರರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಕೊಲೆಗಾರರ ಸುಳಿವು ಸಿಕ್ಕಿದೆ. ಅವರನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.
ಶಿವಮೊಗ್ಗ ಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕೊಲೆ ನಡೆದಿರುವುದು ದುರದೃಷ್ಟಕರವಾಗಿದೆ. ಈ ರೀತಿ ಕೊಲೆ ಮಾಡುವ ವಿಕೃತತೆಯನ್ನು ಬಿಡಬೇಕು. ಜನ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.
ಮೃತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿದ ಗೃಹ ಸಚಿವರು ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಹಾಗೂ ಆರ್ಎಎಫ್ ನಿಯೋಜನೆ ಮಾಡಲಾಗಿದೆ. ಕೊಲೆಯಾದ ಯುವಕನ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ, ನಿಷೇಧಾಜ್ಞೆ ಜಾರಿ