ಶಿವಮೊಗ್ಗ :ಕಲಬುರಗಿ ಪಾಲಿಕೆ ಆಯುಕ್ತರ ಪ್ರಕರಣದಲ್ಲಿ ಕಾನೂನಿನಡಿ ಕ್ರಮಕೈಗೊಳ್ಳಲಾಗುವುದು. ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಲಬುರಗಿ ಆಯುಕ್ತರ ಪ್ರಕರಣದ ಸಂಪೂರ್ಣ ಮಾಹಿತಿ ನನ್ನ ಬಳಿ ಇಲ್ಲ. ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದರು.
ಎಸಿಬಿ ದಾಳಿ ನಿರಂತರ ಪ್ರಕ್ರಿಯೆ :ಎಸಿಬಿ ದಾಳಿಯು ನಿರಂತರ ಪ್ರಕ್ರಿಯೆಯಾಗಿದೆ. ಈ ದಾಳಿ ನಡೆಸಲು ಅಧಿಕಾರಿಗಳು ಸಾಕಷ್ಟು ಶ್ರಮವಹಿಸಿ ಸಾಕ್ಷಿ, ದಾಖಲೆ ಸಂಗ್ರಹ ಮಾಡುತ್ತಾರೆ. ಇದರಿಂದ ಯಾರ ಮೇಲೂ ಸುಮ್ಮನೆ ರೇಡ್ ಮಾಡಲು ಸಾಧ್ಯವಿಲ್ಲ. ಎಸಿಬಿ ಅಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿರುತ್ತಾರೆ ಎಂದು ಇದೇ ವೇಳೆ ಸಚಿವರು ಹೇಳಿದರು.