ಶಿವಮೊಗ್ಗ: ಪಾವಗಡ ಬಳಿ ನಡೆದ ಬಸ್ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ನಾನು ಸಂಜೆಯೊಳಗೆ ತುಮಕೂರು ತಲುಪಿ, ಗಾಯಾಳುಗಳ ಆರೋಗ್ಯ ವಿಚಾರಿಸುವೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾವಗಡ ಸಮೀಪದಲ್ಲಿ ನಡೆದ ಬಸ್ ಅಪಘಾತದಲ್ಲಿ ಬಹಳ ಮಂದಿ ಗಾಯಗೊಂಡಿದ್ದಾರೆ. ಹಲವರು ಮೃತಪಟ್ಟಿದ್ದಾರೆ ಎಂಬ ಬಗ್ಗೆ ವರದಿ ಬರುತ್ತಿದೆ. ಸುಮಾರು 8 ಮಂದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ನಾನು ಸ್ಥಳಕ್ಕೆ ಡಿಸಿ ಹಾಗೂ ಎಸ್ಪಿ ಅವರನ್ನು ಕಳುಹಿಸಿದ್ದೇನೆ.