ಶಿವಮೊಗ್ಗ: ಸೊರಬ ತಾಲೂಕಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿಯ ಕಚೇರಿಯಲ್ಲಿ ತಹಶೀಲ್ದಾರ್ ಎಸ್.ಎಸ್. ಶೋಭಲಕ್ಷ್ಮಿ ಅವರ ಸಮ್ಮುಖದಲ್ಲಿ ನಡೆಯಿತು. ಜುಲೈ ತಿಂಗಳಿನಲ್ಲಿ 12,05,395 ರೂ., ಸಂಗ್ರಹವಾಗಿದ್ದು, ಕಳೆದ ಮೇ ತಿಂಗಳಿನಲ್ಲಿ ಹುಂಡಿ ಎಣಿಕೆ ಕಾರ್ಯ ಮಾಡಿದಾಗ 22,71,900 ರೂ., ಹಾಗೂ ಮಾರ್ಚ್‌ನಲ್ಲಿ ಹುಂಡಿ ಎಣಿಕೆ ಮಾಡಿದ 24,54,445 ರೂ., ಗರಿಷ್ಠ ಮೊತ್ತದ ಹಣ ಸಂಗ್ರಹವಾಗಿತ್ತು.
ಹುಂಡಿ ಎಣಿಕೆ ಕಾರ್ಯದಲ್ಲಿ ಪ್ರಭಾರ ಉಪತಹಶೀಲ್ದಾರ್ ವಿ.ಎಲ್. ಶಿವಪ್ರಸಾದ್, ದೇವಸ್ಥಾನದದ ಆಡಳಿತ ಮಂಡಳಿ ಕಾರ್ಯನಿರ್ವಹಣಾಧಿಕಾರಿ ಎನ್.ಆರ್. ರಂಗಪ್ಪ, ಶಿರಸ್ತೆದಾರ್ ನಿರ್ಮಲಾ, ಮುಜರಾಯಿ ಇಲಾಖೆಯ ಎಂ. ಶೃತಿ ಸೇರಿದಂತೆ ಗ್ರಾಮ ಲೆಕ್ಕಿಗರು ಹಾಗೂ ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು. ಹುಂಡಿ ಎಣಿಕೆ ಕಾರ್ಯ ನಡೆಯುವ ಕೊಠಡಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು.