ಶಿವಮೊಗ್ಗ:ಅಕ್ರಮ ನಾಟಾ ಸಂಗ್ರಹ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದ್ದು, ಓರ್ವ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹೊಸಬೀಡು ಗ್ರಾಮದಲ್ಲಿ ನಡೆದಿದೆ.
ಹೊಸಬೀಡು ಗ್ರಾಮದ ಪೂರ್ಣೇಶ್ ಗೌಡ ಎಂಬಾತ ತಾನು ತೋಟದಲ್ಲಿ ನಿರ್ಮಿಸುತ್ತಿರುವ ಮನೆಗೆ ಬೇಕಾದ ನಾಟಾ ಅನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಪೂರ್ಣೇಶ್ ಮನೆ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಬೀಟೆ ದಾಸ್ತಾನು ಇರುವುದು ಕಂಡು ಬಂದಿದೆ. ಈ ವೇಳೆ ಅರಣ್ಯ ಸಿಬ್ಬಂದಿಯನ್ನು ತಳ್ಳಿ ಪೂರ್ಣೇಶ್ ಪರಾರಿಯಾಗಿದ್ದಾನೆ.