ಶಿವಮೊಗ್ಗ: ಐಎಂಎ ಜುವೆಲ್ಲರಿ ಕಂಪನಿಯಲ್ಲಿ ನಡೆದಿದೆ ಎನ್ನಲಾದ 10 ಸಾವಿರ ಕೋಟಿ ರೂಗೂ ಅಧಿಕ ಮೊತ್ತದ ಹಗರಣವನ್ನು ಸಿಬಿಐಗೆ ವಹಿಸುವಂತೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಐಎಂಎ ಜ್ಯುವೆಲ್ಲರಿ ಹಗರಣ: CBIಗೆ ವಹಿಸಲು ಈಶ್ವರಪ್ಪ ಒತ್ತಾಯ
ಐಎಂಎ ಕಂಪನಿಯ ಭಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಅಸಹಾಯಕ ರೀತಿಯಲ್ಲಿ ವರ್ತಿಸುತ್ತಿದೆ. ಬಡ, ಮಧ್ಯಮ ವರ್ಗದವರು ಬೀದಿಗೆ ಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಈ ಕೂಡಲೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.
ಕೆ.ಎಸ್ ಈಶ್ವರಪ್ಪ
ರಾಜ್ಯ ಸರ್ಕಾರ ಅಸಹಾಯಕರ ರೀತಿಯಲ್ಲಿ ವರ್ತಿಸುತ್ತಿದೆ. ಬಡ, ಮಧ್ಯಮವರ್ಗದವರು ಬೀದಿಗೆ ಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ಕೊಡ್ತಿದ್ದಾರೆ. ಈ ಜನರ ಕಾಳಜಿ ಬಗ್ಗೆ ಸರ್ಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ವಾ? ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ನಡೆದ ಅತೀ ದೊಡ್ಡ ಹಗರಣ ಇದಾಗಿದೆ. ಈ ಹಗರಣದ ಹಿನ್ನೆಲೆಯಲ್ಲಿ ಯಾವುದೇ ಸಂಸ್ಥೆಯಲ್ಲಿ ಜನರು ಹೂಡಿಕೆ ಮಾಡುವುದಕ್ಕೆ ಭಯ ಪಡುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಲು ಮುಂದಾಗಲಿ, ಇಲ್ಲದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದರು.
TAGGED:
ಶಿವಮೊಗ್ಗ