ಕರ್ನಾಟಕ

karnataka

ಕೆಲ ಬಿಜೆಪಿ ಶಾಸಕರ ವರ್ತನೆ ನನಗೆ ಬೇಸರ ತರಿಸಿದೆ: ಕೆ.ಎಸ್. ಈಶ್ವರಪ್ಪ ಅಸಮಾಧಾನ

ಸಂಪುಟ ವಿಸ್ತರಣೆ ಸಂಬಂಧ ಅಸಮಾಧಾನ ಇರುವುದು ನಿಜ. ಆದರೆ, ಅದನ್ನು ಎಲ್ಲಿ ಸರಿಪಡಿಸಿಕೊಳ್ಳಬೇಕೋ ಅಲ್ಲಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆಯಾ? ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

By

Published : Jan 15, 2021, 10:37 AM IST

Published : Jan 15, 2021, 10:37 AM IST

k s eshwarappa
ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಇತ್ತೀಚೆಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆ, ಶಾಸಕರ ವರ್ತನೆ ನನಗೆ ಬೇಸರ ತರಿಸಿದೆ. ಪಕ್ಷದ ಹಿತೈಷಿಗಳಿಗೆ, ಹಿರಿಯರಿಗೆ ಈ ಬೆಳವಣಿಗೆ ಸಮಾಧಾನ ಇಲ್ಲ. ಇದು ಬಿಜೆಪಿನಾ ಎಂಬ ಅನುಮಾನ ಹುಟ್ಟುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇವಲ ಮಂತ್ರಿಯಾಗುವುದಕ್ಕೋಸ್ಕರ ಮಾತ್ರ ರಾಜಕಾರಣಿಯಾಗುವುದು ಸರಿಯಲ್ಲ. ಈ ರೀತಿ ಸಮಸ್ಯೆಯನ್ನು ಯಾರು ಉಂಟು ಮಾಡುತ್ತಿದ್ದಾರೋ ಅವರ ಮೇಲೆ ನಾಳೆಯ ದಿನ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬಹುದು. ಆದರೆ, ನಮ್ಮ ಪಕ್ಷದವರ ಮೇಲೆ ಶಿಸ್ತು ಕ್ರಮ ಜರುಗಿಸುವುದು ಕೂಡ ಸರಿಯಾಗೋದಿಲ್ಲ ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.

ಸಂಪುಟ ವಿಸ್ತರಣೆ ಸಂಬಂಧ ಅಸಮಾಧಾನ ಇರುವುದು ನಿಜ. ಆದರೆ, ಅದನ್ನು ಎಲ್ಲಿ ಸರಿಪಡಿಸಿಕೊಳ್ಳಬೇಕೋ ಅಲ್ಲಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆಯಾ? ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣನಿಂದ 31 ಬಿಟ್ ಕಾಯಿನ್ ಜಪ್ತಿ.. ಇದರ ಮೌಲ್ಯವೆಷ್ಟು ಗೊತ್ತೇ?

ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ, ಅವರ ಕುಟುಂಬದವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈ ಎಲ್ಲಾ ಬೆಳವಣಿಗೆಯನ್ನು ಹೈಕಮಾಂಡ್ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ABOUT THE AUTHOR

...view details