ಶಿವಮೊಗ್ಗ: ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನರಾಗಿದ್ದಾರೆ. ತೀರ್ಥಹಳ್ಳಿಯ ಸೀಬಿನಕೆರೆಯ ನಿವಾಸಿ ವಿನಯ ಜ್ವರದಿಂದ ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ವಿನಯ್ ತೀರ್ಥಹಳ್ಳಿಯ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದರು. ಆದರೆ, ಜ್ವರ ಇನ್ನಷ್ಟು ಹೆಚ್ಚಾದಾಗ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಜ್ವರ ನಿಯಂತ್ರಣಕ್ಕೆ ಬಾರದೇ ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾರೆ.
ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋ ಖೋ ಕ್ರೀಡಾಪಟು ವಿನಯ್ ಇನ್ನಿಲ್ಲ! - ರಾಜ್ಯ ಖೋ ಖೋ ತಂಡ
ಅತೀವ ಜ್ವರದಿಂದ ಬಳಲುತ್ತಿದ್ದ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋ ಖೋ ಕ್ರೀಡಾಪಟು ವಿನಯ್ ಮೃತಪಟ್ಟಿದ್ದಾರೆ.
ವಿನಯ್ ಖೋ ಖೋ ಕ್ರೀಡಾಪಟುವಾಗಿದ್ದು, ಅನೇಕ ಪ್ರಶಸ್ತಿಗಳನ್ನು ಪಡೆದು ಕೊಂಡಿದ್ದಾರೆ. ಇವರು ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ನಿಂದ ಹೊರಹೊಮ್ಮಿದ ಪ್ರತಿಭೆಯಾಗಿದ್ದಾರೆ. ವಿನಯ್ ರಾಜ್ಯ ಖೋ ಖೋ ತಂಡವನ್ನು ಪ್ರತಿನಿಧಿಸುತ್ತಿದ್ದರು. ಇವರಿಗೆ ಕ್ರೀಡೆಗೆ ನೀಡುವ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ವಿನಯ್ ಅಂತಿಮ ದರ್ಶನಕ್ಕೆ ತೀರ್ಥಹಳ್ಳಿಯ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿನಯ್ ನಿಧನಕ್ಕೆ ಕ್ರೀಡಾ ಪ್ರೇಮಿಗಳು, ತೀರ್ಥಹಳ್ಳಿಯ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.
ಓದಿ:ಶಿವಮೊಗ್ಗದಲ್ಲಿ 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ.. ಖ್ಯಾತ ಖೋ-ಖೋ ಆಟಗಾರ ದಾರುಣ ಸಾವು