ಕರ್ನಾಟಕ

karnataka

ETV Bharat / city

ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡಿ: ಕೋಡಿಹಳ್ಳಿ ಬೃಹನ್ಮಠದ ಶ್ರೀ - ಜಗದ್ಗುರು ಆದಿಜಾಂಬವ ಮಾರ್ಕಂಡೇಯ ಸ್ವಾಮೀ

ಶಿವಮೊಗ್ಗ ಜಿಲ್ಲೆಯ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹೆಸರು ಇಡಬೇಕು ಎಂದು ಕೋಡಿಹಳ್ಳಿ ಬೃಹನ್ಮಠದ ಶ್ರೀಗಳು ಒತ್ತಾಯಿಸಿದ್ದಾರೆ.

Kodihalli bruhanmath swamiji on shimogga new airport
ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ವಿಮಾನನಿಲ್ದಾಣಕ್ಕೆ ಅಂಬೇಡ್ಕರ್ ಹೆಸರಿಡಿ: ಕೋಡಿಹಳ್ಳಿ ಬೃಹನ್ಮಠದ ಶ್ರೀ

By

Published : Aug 19, 2021, 4:13 AM IST

Updated : Aug 19, 2021, 4:26 AM IST

ಶಿವಮೊಗ್ಗ:ಜಿಲ್ಲೆಯ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹೆಸರಿಡಬೇಕು ಎಂದು ಕೋಡಿಹಳ್ಳಿ ಬೃಹನ್ಮಠದ ಶ್ರೀ ಜಗದ್ಗುರು ಆದಿಜಾಂಬವ ಮಾರ್ಕಂಡೇಯ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಹೆಸರು ಇಡಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಕೋಡಿಹಳ್ಳಿ ಬೃಹನ್ಮಠದ ಶ್ರೀಗಳು

ಇನ್ನು ಎಸ್ಸಿ ಮತ್ತು ಎಸ್ಟಿ ಬಗರ್ ಹುಕುಂ ಸಾಗುವಳಿ ಜಮೀನನ್ನು ಅಕ್ರಮ-ಸಕ್ರಮ ಯೋಜನೆಯಡಿಯಲ್ಲಿ ಸಕ್ರಮಗೊಳಿಸಿ ಸಾಗುವಳಿ ಚೀಟಿ ಮತ್ತು ಹಕ್ಕು ಪತ್ರ ನೀಡಬೇಕು, ಹಾಸ್ಟೆಲ್​ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು. ಎಸ್ಸಿ, ಎಸ್ಟಿ ವಸತಿ ಯೋಜನೆಯಡಿಯಲ್ಲಿ ಸಹಾಯಧನವನ್ನು ಹೆಚ್ಚಿಸಿಬೇಕು ಎಂದು ಆಗ್ರಹಿಸಿದರು. ಈ ಬೇಡಿಕೆಗಳು ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಶ್ರೀಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಚಿಂದಿ ಆಯುವ ಮಹಿಳೆಯ ಇಂಗ್ಲಿಷ್ ಕೌಶಲ್ಯ: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್​ ಸೃಷ್ಟಿಸಿದ ವಿಡಿಯೋ

Last Updated : Aug 19, 2021, 4:26 AM IST

ABOUT THE AUTHOR

...view details