ಶಿವಮೊಗ್ಗ: ಎದುರಿಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ನಡೆದಿದೆ.
ಸಾಗರದಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾಸ್ಪಾಡಿ ಗ್ರಾಮದ ಕೆರೆ ಏರಿ ಮೇಲೆ ಏಕಾಏಕಿ ಬೈಕ್ ಅಡ್ಡಬಂದಿದೆ. ಇದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ವೇಳೆ, ಬಸ್ನಲ್ಲಿದ್ದ 28 ಪ್ರಯಾಣಿಕರ ಪೈಕಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.