ಶಿವಮೊಗ್ಗ :ಟಾಟಾ ಏಸ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು 22 ಜನರು ಗಾಯಗೊಂಡಿರುವ ಘಟನೆ ಸೊರಬ ತಾಲೂಕಿನ ಕೊಡಕಣಿ ಗ್ರಾಮದಲ್ಲಿ ನಡೆದಿದೆ. ಶಿರಸಿಯ ಗಣೇಶನಗರ ನಿವಾಸಿ ಸಾವಿತ್ರಿಬಾಳು ಗೋಸಾವಿ (58) ಮೃತ ದುರ್ದೈವಿ. ಶಿರಸಿಯಿಂದ ಹಿರೇಕೆರೂರಿಗೆ ಚಲಿಸುತ್ತಿದ್ದ ಟಾಟಾ ಏಸ್ ವಾಹನ ಶಿರಾಳಕೊಪ್ಪದಿಂದ ಸೊರಬಕ್ಕೆ ಆಗಮಿಸುತ್ತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ.
ಟ್ರ್ಯಾಕ್ಟರ್, ಟಾಟಾ ಏಸ್ ನಡುವೆ ಡಿಕ್ಕಿ : ಮಹಿಳೆ ಸಾವು, 22 ಮಂದಿಗೆ ಗಾಯ! - accident in shivamogga
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಾವಿತ್ರಿ ಬಾಳು ಗೋಸಾವಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಶಿರಾಳಕೊಪ್ಪ ಹಾಗೂ ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಟ್ರ್ಯಾಕ್ಟರ್, ಟಾಟಾ ಏಸ್ ಆಕ್ಸಿಡೆಂಟ್
ಇದನ್ನೂ ಓದಿ:ವಿಜಯಪುರ : ವಿದ್ಯುತ್ ಸ್ಪರ್ಶಿಸಿ ಸಹೋದರರ ಸಾವು
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಾವಿತ್ರಿ ಬಾಳು ಗೋಸಾವಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಶಿರಾಳಕೊಪ್ಪ ಹಾಗೂ ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.