ಶಿವಮೊಗ್ಗ: ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಬಲ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಶಾಂತವೀರ ನಾಯ್ಕ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೊರಬ ಕ್ಷೇತ್ರದ ಮಾಜಿ ಶಾಸಕ ಹಾಗೂ ಜಿಲ್ಲೆಯ ಬಗರ್ ಹುಕ್ಕುಂ ಸಾಗುವಳಿ ಹೋರಾಟಗಾರ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಬಲ ನೀಡಿದೆ. ಪಕ್ಷದ ತತ್ವಸಿದ್ಧಾಂತ ಮೆಚ್ಚಿ ಹಾಗೂ ಕಾಂಗ್ರೆಸ್ನಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು ಇದೇ ತಿಂಗಳ 30ರಂದು ಹುಬ್ಬಳ್ಳಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ.