ಕರ್ನಾಟಕ

karnataka

ETV Bharat / city

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡನೆ: ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ - ಜೆಡಿಯು ರಾಜ್ಯ ಕಾರ್ಯದರ್ಶಿ

ಬಿಪಿಎಲ್​ ಕಾರ್ಡು ಹೊಂದರಿವವರಿಗೆ ಎಲೆಕ್ಟ್ರಿಕ್ ಸ್ಟವ್ ಅಥವಾ ಸೋಲಾರ್ ಸೆಟ್​​ ನೀಡಬೇಕು ಎಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ಆಗ್ರಹಿಸಿದ್ದಾರೆ.

man-protest-against-petrol-diesel-rate-hike-in-shimogga
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡನೆ: ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ

By

Published : Oct 19, 2021, 3:32 AM IST

ಶಿವಮೊಗ್ಗ:ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳು ಸೇರಿದಂತೆ ಪೆಟ್ರೋಲ್, ಡೀಸೆಲ್‌, ಗ್ಯಾಸ್ ಬೆಲೆ ಏರಿಕೆ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕ್​​ನಲ್ಲಿರುವ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ಕೊರೊನಾ ಸಂಕಷ್ಟದ ನಡುವೆಯೂ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಗಳು ಆಗುತ್ತಿರುವುದರಿಂದ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವುದು ಕಷ್ಟವಾಗಿದೆ. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದ 33 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅಡುಗೆ ಅನಿಲ, ಅಡುಗೆ ಎಣ್ಣೆ, ಹಾಗೂ ಬೇಳೆಕಾಳುಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕೆಂದು ಪ್ರತಿಭಟನೆ ವೇಳೆ ಒತ್ತಾಯಿಸಿದ್ದಾರೆ.

ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ

ಬಿಪಿಎಲ್​ ಕಾರ್ಡು ಹೊಂದರಿವವರಿಗೆ ಎಲೆಕ್ಟ್ರಿಕ್ ಸ್ಟವ್ ಅಥವಾ ಸೋಲಾರ್ ಸೆಟ್​​ ನೀಡಬೇಕು ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಗಳು ಆಗುತ್ತಿರುವುದರಿಂದ ಪೆಟ್ರೋಲ್, ಡಿಸೇಲ್ ಗೆ ಪರ್ಯಾಯವಾಗಿ ಬೇರೆ ವ್ಯವಸ್ಥೆ ಮಾಡಬೇಕು ಹಾಗೂ ಎಲೆಕ್ಟ್ರಾನಿಕ್ ವಾಹನಗಳಿಗೆ ಸರ್ಕಾರ ಉತ್ತೇಜನ ನೀಡಬೇಕು ಎಂದು ಆಗ್ರಹಿಸಿ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್​​ನ 13 ಮುಖಂಡರ ವಿರುದ್ದ ಎಸಿಬಿಗೆ ದೂರು

ABOUT THE AUTHOR

...view details