ಶಿವಮೊಗ್ಗ: ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ಯುವಕ ನಿರಿಗೆ ಬಿದ್ದಿದ್ದ ಜಿಂಕೆ ಮರಿಯನ್ನು ರಕ್ಷಿಸಿ ಪಶು ವೈದ್ಯರ ಬಳಿ ಚಿಕಿತ್ಸೆ ಕೊಡಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾನೆ.
ನಾಲೆಗೆ ಬಿದ್ದ ಜಿಂಕೆ ಮರಿ ರಕ್ಷಿಸಿ ಮಾನವೀಯತೆ ಮೆರೆದ ಶಿವಮೊಗ್ಗದ ಯುವಕ - ಜಿಂಕೆ
ನಾಲೆಗೆ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದ ಜಿಂಕೆ ಮರಿಯನ್ನು ಯುವಕನೋರ್ವ ರಕ್ಷಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಂಕೆ ಮರಿಯನ್ನು ರಕ್ಷಿಸಿದ ಯುವಕನ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ನಾಲೆಗೆ ಬಿದ್ದ ಜಿಂಕೆ ಮರಿಯ ರಕ್ಷಣೆ
ಭದ್ರಾ ಬಲದಂಡೆಯ ನಾಲೆಗೆ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದ ಜಿಂಕೆ ನಾಲೆಯಲ್ಲಿ ತೇಲಿಕೊಂಡು ಹೋಗುತ್ತಿತ್ತು. ಈ ಸಂದರ್ಭ ಪವನ್ ಎಂಬ ಯುವಕ ತನ್ನ ಪ್ರಾಣವನ್ನೂ ಲೆಕ್ಕಿಸದೆ ನಾಲೆಗೆ ಹಾರಿ ಜಿಂಕೆ ಮರಿಯನ್ನು ರಕ್ಷಿಸಿದ್ದಾನೆ.
ಯುವಕನ ಕಾರ್ಯಕ್ಕೆ ಅರಕೆರೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಶ್ಲಾಘಿಸಿದ್ದಾರೆ.