ಶಿವಮೊಗ್ಗ:ಕಾಂಗ್ರೆಸ್ ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಅಂತಹ ಪಕ್ಷದ ಮುಂದಾಳತ್ವದಲ್ಲಿ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಟ ಮಾಡಲು ಸಾಧ್ಯವೇ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ದೇಶದಲ್ಲಿ ಏನೂ ಮಾಡುತ್ತಿಲ್ಲ. ಪ್ರಾದೇಶಿಕ ಪಕ್ಷಗಳು ಜೊತೆ ಸೇರಿ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ. ಬಿಜೆಪಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಬೆಳೆದ ಪಕ್ಷ. ಅದನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ: ಡಿ.10ರ ನಂತರ ರಾಜ್ಯ ರಾಜಕೀಯದಲ್ಲಿ ಬಾರಿ ಬದಲಾವಣೆ: ಬಸವನಗೌಡ ಪಾಟೀಲ್ ಹೊಸ ಬಾಂಬ್