ಕರ್ನಾಟಕ

karnataka

ETV Bharat / city

ಶಿವಮೊಗ್ಗಕ್ಕೆ ಒಂದು ದಿನದ ಪ್ರವಾಸ ಕೈಗೊಂಡ ಸಚಿವ ಕೃಷ್ಣ ಬೈರೇಗೌಡ.. - undefined

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡರು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ

By

Published : Jun 19, 2019, 4:59 PM IST

ಶಿವಮೊಗ್ಗ:ಜಿಲ್ಲೆಯಲ್ಲಿ ಕುಡಿಯುವ ನೀರು, ಇಲಾಖೆಯ ಪ್ರಗತಿ ಪರಿಶೀಲನೆ ಮತ್ತು ಕ್ಷೇತ್ರಕ್ಕೆ ಭೇಟಿ ನಂತರ ಅದನ್ನು ವಿಮರ್ಶಿಸುವ ಸಲುವಾಗಿ ಒಂದು ದಿನದ ಪ್ರವಾಸವನ್ನು ಕೈಗೊಂಡಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಜಿಲ್ಲೆಯ ಪ್ರವಾಸದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಾಯು ಚಂಡಮಾರುತ ಬಂದಿದ್ದರಿಂದ ಮೋಡಗಳು ಕರಾವಳಿ ಭಾಗಕ್ಕೆ ಸೆಳೆದಿದ್ದರ ಪರಿಣಾಮವಾಗಿ ಒಳನಾಡು ಭಾಗದಲ್ಲಿ ಮಳೆ ಕೊರತೆಯಾಗಿದೆ. ಹವಾಮಾನ ಇಲಾಖೆಯು ಈ ವಾರದಿಂದ ಮುಂಗಾರು ಶುರುವಾಗುತ್ತದೆ ಎಂದು ತಿಳಿಸಿದ್ದು, ಇನ್ನೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ

ಇದೇ ವೇಳೆ ಐಎಂಎ ಪ್ರಕರಣದ ಕುರಿತು ಮಾತನಾಡಿದ ಅವರು, ಇಂತಹ ಪ್ರಕರಣಗಳು ಹಿಂದೆ ಸಹ ನಡೆದಿವೆ. ಈ ಹಿಂದೆ ವಿನಿವಿಂಕ್​ ಶಾಸ್ತ್ರಿ ಎಂಬಾತ ಸಹ ಈ ರೀತಿಯಲ್ಲಿ ವಂಚಿಸಿದ್ದ. ಕಾನೂನು ತಿದ್ದುಪಡಿ ಮಾಡಿ ಇಂತಹ ಕಂಪನಿಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಹಾಗೂ ಮೊಕದ್ದಮೆ ದಾಖಲು ಮಾಡಿಕೊಳ್ಳುವ ಕಾನೂನನ್ನು ಈ ಅಧಿವೇಶನದಲ್ಲಿ ತರುತ್ತೇವೆ ಎಂದು ಕಂದಾಯ ಸಚಿವರು ತಿಳಿಸಿದ್ದಾರೆ. ಸರ್ಕಾರ ಇಂತಹ ಕ್ರಮಗಳನ್ನು ಕಡಿವಾಣ ಹಾಕಲು ಕಾನೂನು ತರುವಂತ ವಿಚಾರ ಮಾಡಿದ್ದೇವೆ. ಐಎಂಎ ಸಂಸ್ಥೆಯ ಆಸ್ತಿ-ಪಾಸ್ತಿ ಪತ್ತೆ ಮಾಡಿ, ಎಷ್ಟು ಜನ ಹಣಸಂದಾಯ ಮಾಡಿದ್ದಾರೆ, ಅದರಲ್ಲಿ ಎಷ್ಟು ಜನರಿಗೆ ಹಣವನ್ನು ನೀಡಬಹುದು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದರು.

For All Latest Updates

TAGGED:

ABOUT THE AUTHOR

...view details