ಶಿವಮೊಗ್ಗ:ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಅದನ್ನ ತಂದಿದ್ದೇನೆ ಅದರಲ್ಲಿ ವಿಶೇಷವೇನಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್ಗೆ ಪತ್ರದ ಮೂಲಕ ದೂರು ನೀಡಿದ್ದರು. ಈ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಬಹಳ ವಿಶೇಷವೇನಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಹಾಗಾಗಿ ರಾಜ್ಯಪಾಲರ ಬಳಿ ಹೋಗಿ ಚರ್ಚೆ ಮಾಡಿಕೊಂಡು ಬಂದಿದ್ದೇನೆ.