ಶಿವಮೊಗ್ಗ: ಜಿಲ್ಲೆಯ ಸೊಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವುದು ಸೂಕ್ತ ಎಂದು ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಎಂ.ಎನ್ ಲಕ್ಷ್ಮಿದೇವಿ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ಸೂಕ್ತ: ಎಂ.ಎನ್ ಲಕ್ಷ್ಮಿದೇವಿ - Shivamogga Airport name
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರೇ ಸೂಕ್ತ ಎಂದು ಹಿರಿಯ ಕಲಾವಿದೆ ಎಂ.ಎನ್ ಲಕ್ಷ್ಮಿದೇವಿ ವಿಡಿಯೋ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಂ.ಎನ್ ಲಕ್ಷ್ಮಿದೇವಿ
ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡುವಂತೆ ಮನವಿ ಮಾಡಿಕೊಂಡ ಹಿರಿಯ ಕಲಾವಿದೆ ಎಂ.ಎನ್ ಲಕ್ಷ್ಮಿದೇವಿ
ಈ ಕುರಿತು ವಿಡಿಯೋ ಮೂಲಕ ಮನವಿ ಮಾಡಿಕೊಂಡಿರುವ ಅವರು, ನಮ್ಮ ಶಿವಮೊಗ್ಗ ತಂಡದಿಂದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕು ಎಂಬ ಸಾಮಾಜಿಕ ಜಾಲತಾಣದ ಅಭಿಯಾನಕ್ಕೆ ನನ್ನ ಬೆಂಬಲವಿದೆ. ರಾಷ್ಟ್ರಕವಿ ಕುವೆಂಪು ಅವರ ಹೆಸರೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸೂಕ್ತ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.