ಕರ್ನಾಟಕ

karnataka

ETV Bharat / city

ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ನೀಡ್ತಾರೆ ಗೊತ್ತಿಲ್ಲ: ಬಿ.ವೈ.ರಾಘವೇಂದ್ರ - MP BY Raghavendra reaction about Union Cabinet Expansion

ಎರಡನೇ ಹಂತದಲ್ಲಿ ಕೇಂದ್ರ‌ ಸರ್ಕಾರದ ಸಚಿವ ಸಂಪುಟ ಪುನಾಚರನೆಯಾಗುತ್ತಿದೆ. ರಾಜ್ಯದ ಎಷ್ಟು ಮಂದಿ ಸಂಸದರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂದು ತಿಳಿದಿಲ್ಲ. ರಾಜ್ಯ ಹಾಗೂ ಕೇಂದ್ರದ ನಾಯಕರು ತೀರ್ಮಾನ ಮಾಡಿ ಅರ್ಹರಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.

shivamogga
ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ನೀಡ್ತಾರೆ ಗೊತ್ತಿಲ್ಲ: ಬಿ.ವೈ.ರಾಘವೇಂದ್ರ

By

Published : Jul 7, 2021, 2:44 PM IST

ಶಿವಮೊಗ್ಗ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬುದು ನನಗೆ ತಿಳಿದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಎಷ್ಟು ಜನರಿಗೆ ಸಚಿವ ಸ್ಥಾನ ನೀಡ್ತಾರೆ ಗೊತ್ತಿಲ್ಲ: ಬಿ.ವೈ.ರಾಘವೇಂದ್ರ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಹಂತದಲ್ಲಿ ಕೇಂದ್ರ‌ ಸರ್ಕಾರದ ಸಚಿವ ಸಂಪುಟ ಪುನಾಚರನೆಯಾಗುತ್ತಿದೆ. ರಾಜ್ಯದ ಎಷ್ಟು ಮಂದಿ ಸಂಸದರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂದು ತಿಳಿದಿಲ್ಲ. ರಾಜ್ಯ ಹಾಗೂ ಕೇಂದ್ರದ ನಾಯಕರು ತೀರ್ಮಾನ ಮಾಡಿ ಅರ್ಹರಿಗೆ ಸಚಿವ ಸ್ಥಾನ ನೀಡಲಿದ್ದಾರೆ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗೇ ಆಗುತ್ತೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಕೇಂದ್ರದ ವರಿಷ್ಠರು ಹಾಗೂ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಇದನ್ನು ಸ್ಪಷ್ಟಪಡಿಸಿದ್ದಾರೆ. ಆದರೆ‌, ಕೆಲವರು ಈಗಲೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಮಾತನಾಡುವವರು ಮಾತನಾಡಲಿ ಸರ್ಕಾರ ಅದರಪಾಡಿಗೆ ಅದು ನಡೆಯುತ್ತದೆ ಎಂದರು.

ಇದನ್ನೂ ಓದಿ:ಕೋವಿಡ್ ನಿಯಮ ಪಾಲಿಸದಿದ್ದರೆ ಅಂಗಡಿಗಳಿಗೆ ಬೀಗ ಗ್ಯಾರಂಟಿ: ಗೌರವ್ ಗುಪ್ತಾ ಖಡಕ್​ ಸೂಚನೆ

ABOUT THE AUTHOR

...view details