ಶಿವಮೊಗ್ಗ: ರಸಗೊಬ್ಬರದ ಚೀಲದ ಮೇಲೆ ಕೃಷಿ ಇಲಾಖೆ ನಮೂದಿಸಿರುವ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದಲ್ಲಿ ತಪ್ಪದೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆ ಕಚೇರಿಗೆ ದೂರು ನೀಡುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಸಗೊಬ್ಬರ ಮಾರಾಟಗಾರರು 2021ರ ಏಪ್ರಿಲ್ 1ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರಗಳ ಚೀಲದ ಮೇಲಿನ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ.