ಶಿವಮೊಗ್ಗ: ಮಲೆನಾಡಿನಲ್ಲಿ ದೀಪಾವಳಿ ಬಳಿಕ ನಡೆಯುವ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ ಸಂಭವಿಸಿದೆ. ವೃದ್ಧನಿಗೆ ಹೋರಿ ತಿವಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹರಮಘಟ್ಟದಲ್ಲಿ ಶನಿವಾರ ನಡೆದಿದೆ.
ಶನಿವಾರ ಶಿವಮೊಗ್ಗ ಸಮೀಪದ ಹರಮಘಟ್ಟದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಗ್ರಾಮದ ಮಹೇಶಪ್ಪ(65) ಈ ಸ್ಪರ್ಧೆಯನ್ನು ನೋಡಲು ಹೋಗಿದ್ದು, ಹೋರಿ ತಿವಿದ ಕಾರಣ ತೀವ್ರವಾಗಿ ಗಾಯಗೊಂಡಿದ್ದಾರೆ.