ಶಿವಮೊಗ್ಗ:ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ (49) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೊಡ್ಡಪೇಟೆ ಎಎಸ್ಐ ಸುರೇಶ್ ನಿನ್ನೆ ಬೆಳಗಿನ ಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಅವರು ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗಾದ ನಿವಾಸಿಯಾಗಿದ್ದ ಸುರೇಶ್ 1992ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಮೊದಲಿಗೆ ಭದ್ರಾವತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಶಿರಾಳಕೊಪ್ಪ, ಆಗುಂಬೆ, ತೀರ್ಥಹಳ್ಳಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.