ಕರ್ನಾಟಕ

karnataka

ETV Bharat / city

ಬಿಜೆಪಿ ಅತ್ಯಂತ ಬಲಿಷ್ಠ ಅನ್ನೋದು ಮತ್ತೊಮ್ಮೆ ಸಾಬೀತು: ಆಯನೂರು ಮಂಜುನಾಥ್ - ಕರ್ನಾಟಕ ಉಪಚುನಾವಣೆ ಸುದ್ದಿ

ಉಪಚುನಾವಣೆ ಫಲಿತಾಂಶದ ಕುರಿತು ಈ ಟಿವಿ ಭಾರತದೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಇಂದಿನ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಹಾಗೂ ಯಡಿಯೂರಪ್ಪನವರ ಪ್ರಭಾವವನ್ನ ಮತ್ತಷ್ಟು ಹೊಳಪುಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಯನೂರು ಮಂಜುನಾಥ್ ಪ್ರತಿಕ್ರಿಯೆ, Ayanur Manjunath
ಆಯನೂರು ಮಂಜುನಾಥ್ ಪ್ರತಿಕ್ರಿಯೆ

By

Published : Dec 9, 2019, 2:18 PM IST

ಶಿವಮೊಗ್ಗ:ಇಂದಿನ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಪ್ರಭಾವವನ್ನ ಮತ್ತಷ್ಟು ಹೊಳಪುಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ ಫಲಿತಾಂಶದ ಕುರಿತು ಈ ಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನಾಯಕತ್ವವನ್ನು ಎಲ್ಲ ಜಾತಿ, ಧರ್ಮದ ಜನರು ಒಪ್ಪಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ. ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್​ಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಪಡೆದಿದ್ದ ಯಡಿಯೂರಪ್ಪ ಅವರನ್ನ ವಂಚಿಸಿ ಬಹುಮತ ಇಲ್ಲದ ಎರಡು ಪಕ್ಷಗಳು ಸೇರಿ ಅಧಿಕಾರ ಹಿಡಿದಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಆಯನೂರು ಮಂಜುನಾಥ್ ಪ್ರತಿಕ್ರಿಯೆ

ಯಡಿಯೂರಪ್ಪರನ್ನ ಬೆಂಬಲಿಸಿ ರಾಜೀನಾಮೆ ನೀಡಿದ ಎಲ್ಲ ಶಾಸಕರನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪರ ನಾಯಕತ್ವವನ್ನು ಪುನರ್​ ಪ್ರತಿಷ್ಠಾಪನೆ ಮಾಡಿದ ಜನತೆ, ಕಾರ್ಯಕರ್ತರು ಹಾಗೂ ಗೆದ್ದಂತಹ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ABOUT THE AUTHOR

...view details