ಶಿವಮೊಗ್ಗ: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊರವಲಯದಲ್ಲಿ ನಡೆದಿದೆ.
ನಿಂತ ಲಾರಿಗೆ ಕಾರು ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಶಿವಮೊಗ್ಗ ರಸ್ತೆ ಅಪಘಾತ
ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊರವಲಯದಲ್ಲಿ ನಡೆದಿದೆ.
road accident
ಗಂಗಾಧರ್ ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ವಕೀಲರಾಗಿದ್ದು, ಭದ್ರಾವತಿಯ ನಿವಾಸಿಯಾಗಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ನಡೆದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಹೋಗುವಾಗ ಈ ಘಟನೆ ನಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.