ಶಿವಮೊಗ್ಗ: ನಿನ್ನೆ ರಾತ್ರಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ನಡೆದ ಕೂಡಲೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ನಿನ್ನೆ ರಾತ್ರಿಯೇ ಎಲ್ಲಾ ಪೊಲೀಸರನ್ನು ನಿಯೋಜಿಸಲಾಗಿದ್ದು, ಜೊತೆಗೆ ಆರ್‌ಎಎಫ್, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಇಂದು ಸಂಜೆ ಪರಿಸ್ಥಿತಿಯನ್ನು ಅವಲೋಕಿಸಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡುವುದರ ಬಗ್ಗೆ ಪರಿಶೀಲಿಸಲಾಗುವುದು ಎಂದರು.