ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಇಂದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಲಾಯಿತು.
ಸೋಮವಾರದವರೆಗೂ ನಗರ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಯನಗರ ಪೊಲೀಸ್ ಠಾಣೆ ಹಾಗೂ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥಸಂಚಲನ ನಡೆಸಲಾಯಿತು.