ಶಿವಮೊಗ್ಗ: ಭದ್ರಾ ಜಲಾಶಯದ ದುರಸ್ತಿ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಮಾಡಿ ಭ್ರಷ್ಟಾಚಾರ ಎಸಗಿರುವ ಇಂಜಿನಿಯರ್ ಹಾಗೂ ಗುತ್ತಿಗೆದಾರನ ವಿರುದ್ಧ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಭದ್ರಾವತಿ ಶಾಸಕ ಸಂಗಮೇಶ್ ಆಗ್ರಹಿಸಿದ್ದಾರೆ.
ಭದ್ರಾ ಜಲಾಶಯದ ದುರಸ್ತಿ ಕಾಮಗಾರಿ ವೀಕ್ಷಿಸಿ ನಂತರ ಮಾತನಾಡಿದ ಅವರು, ಲಕ್ಷಾಂತರ ಜನರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ದುರಸ್ತಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸುವ ಮೂಲಕ ಕಾಮಗಾರಿಯನ್ನು ಕಳಪೆ ಮಾಡಿ ಹಣವನ್ನು ಲೂಟಿ ಹೊಡೆಯಲಾಗಿದೆ.
ಭದ್ರಾ ಡ್ಯಾಂ ದುರಸ್ತಿಯಲ್ಲಿ ಕಳಪೆ ಕಾಮಗಾರಿ ಆರೋಪ; ಕ್ರಮಕ್ಕೆ ಶಾಸಕ ಸಂಗಮೇಶ್ ಆಗ್ರಹ - ಭದ್ರಾವತಿ
ಭದ್ರಾ ಜಲಾಶಯದ ದುರಸ್ತಿ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಆರೋಪ ಕೇಳಿಬಂದಿದೆ. ಇದರಲ್ಲಿ ಭ್ರಷ್ಟಾಚಾರ ಎಸಗಿರುವ ಇಂಜಿನಿಯರ್, ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಭದ್ರಾವತಿ ಶಾಸಕ ಸಂಗಮೇಶ್ ಒತ್ತಾಯಿಸಿದ್ದಾರೆ.
ಭದ್ರಾ ಡ್ಯಾಂ ದುರಸ್ತಿಯಲ್ಲಿ ಕಳಪೆ ಕಾಮಗಾರಿ ಆರೋಪ; ಕ್ರಮಕ್ಕೆ ಶಾಸಕ ಸಂಗಮೇಶ್ ಆಗ್ರಹ
ಸಾರ್ವಜನಿಕರ ತೆರಿಗೆ ಹಣದಲ್ಲಿ ಕಾಮಗಾರಿ ಮಾಡಲಾಗಿದೆ. ಹಾಗಾಗಿ ಕೂಡಲೇ ಸರ್ಕಾರ ಕಳಪೆ ಕಾಮಗಾರಿ ಮೂಲಕ ಭ್ರಷ್ಟಾಚಾರ ಎಸಗಿರುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಬಂಧಿಸಬೇಕು ಇಲ್ಲವಾದರೆ ಕಾಂಗ್ರೆಸ್ ವತಿಯಿಂದ ಇಂಜಿನಿಯರ್ ಕಚೇರಿ ಎದುರು ಧರಣಿ ಕೂತು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.