ಕರ್ನಾಟಕ

karnataka

ನೆರೆ ಪರಿಹಾರ ಕ್ರಮಗಳಿಗೆ ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಸೂಚನೆ: ಸುವರ್ಣಶಂಕರ್

By

Published : Aug 6, 2020, 9:30 PM IST

ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇಂದು ಮಳೆಹಾನಿ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ ನಡೆಸಲಾಯಿತು.

precautionary-measures-for-flood
ಮಳೆಹಾನಿ ಮುನ್ನೆಚ್ಚರಿಕೆ ಕ್ರಮಗಳ ಸಭೆ

ಶಿವಮೊಗ್ಗ : ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಇಚೆಗೆ ನಿರಂತರವಾಗಿ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಸಂಭವಿಸಬಹುದಾದ ಅವಘಡಗಳನ್ನು ನಿಯಂತ್ರಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅರಣ್ಯ, ಮೆಸ್ಕಾಂ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂಧಿ ಸದಾ ಸನ್ನದ್ಧರಾಗಿರುವಂತೆ ಮಹಾನಗರಪಾಲಿಕೆ ಮೇಯರ್ ಸುವರ್ಣಶಂಕರ್ ಅವರು ಸೂಚಿಸಿದರು.

ಮಳೆಹಾನಿ ಮುನ್ನೆಚ್ಚರಿಕೆ ಕ್ರಮಗಳ ಸಭೆ

ಮಹಾನಗರಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ನೆರೆ, ಮಳೆಹಾನಿ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಧರೆಗುರುಳುವ ಮರಗಳನ್ನು ತಕ್ಷಣದಲ್ಲಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಡಳಿತದ ಪಕ್ಷದ ಮುಖ್ಯಸ್ಥ ಚನ್ನಬಸಪ್ಪ ಅವರು ಮಾತನಾಡಿ, ಕಳೆದ ಸಾಲಿನಲ್ಲಿ ಘಟಿಸಿದ ಅವಘಡಗಳ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಲ್ಲಿನ ನ್ಯೂನತೆಗಳು ಪುನರಾವರ್ತನೆಯಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ರಚನೆ, ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಲಹೆ-ಸಹಕಾರ ತುರ್ತು ಅಗತ್ಯಗಳಿಗಾಗಿ ಬೋಟ್, ತೆಪ್ಪ, ಹರಿಗೋಲು ನಡೆಸುವವರು, ಅಗ್ನಿಶಾಮಕ ದಳದ ಸಿಬ್ಬಂಧಿಗಳನ್ನು ಹಾಗೂ ಅಗತ್ಯವಾಗುವ ಪರಿಕರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ತೀವ್ರ ಪ್ರಮಾಣದ ಮಳೆಯಿಂದಾಗಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಗಮನಹರಿಸುವಂತೆ ಪಾಲಿಕೆ ವಿಪಕ್ಷ ನಾಯಕ ಹೆಚ್.ಸಿ.ಯೋಗೀಶ್ ಅವರು ಹೇಳಿದರು.

ABOUT THE AUTHOR

...view details