ಕರ್ನಾಟಕ

karnataka

ETV Bharat / city

ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ದ್ವಿತೀಯ ಪಿಯು ಪರೀಕ್ಷೆಗಳು ನಡೆಯುವ ದಿನದಂದು ಪ್ರತಿದಿನ ಬೆಳಿಗ್ಗೆ 7.30ರಿಂದ ಸಂಜೆ 3.30ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

KN_SMG_DC_KA10011
ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ: ಡಿಸಿ ಕೆ.ಬಿ.ಶಿವಕುಮಾರ್

By

Published : Mar 6, 2020, 10:05 PM IST

ಶಿವಮೊಗ್ಗ:ದ್ವಿತೀಯ ಪಿಯುಪರೀಕ್ಷೆಗಳು ನಡೆಯುವ ದಿನದಂದು ಪ್ರತಿದಿನ ಬೆಳಿಗ್ಗೆ 7.30ರಿಂದ ಸಂಜೆ 3.30ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಕೇಂದ್ರಗಳೊಳಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದು, ಅಲ್ಲದೇ ಮೊಬೈಲ್ ಬಳಕೆಯ ಮೇಲೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರದ 200ಮೀ ಪ್ರದೇಶದ ವ್ಯಾಪ್ತಿಯ ಒಳಗೆ ವಿದ್ಯಾರ್ಥಿಗಳ ತಂದೆ/ತಾಯಿ/ಪೋಷಕರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿ ವರ್ಗದವರು ಒಳಗೊಂಡಂತೆ ಬೇರೆ ಯಾರು ಪ್ರವೇಶಿಸುವಂತಿಲ್ಲ. ಯಾರಾದರೂ 200 ಮೀ ವ್ಯಾಪ್ತಿಯೊಳಗೆ ಪ್ರವೇಶಿಸಿದರೆ/ಪ್ರವೇಶಿಸಲು ಯತ್ನಿಸಿದರೆ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಪೊಲೀಸರ ವಶಕ್ಕೆ ಒಪ್ಪಿಸಿ ಕೂಡಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details