ಶಿವಮೊಗ್ಗ:ಅಪಘಾತದಲ್ಲಿ ಗಾಯಾಗೊಂಡವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರ ರಕ್ಷಣೆ: ಮೆಚ್ಚುಗೆಗೆ ಪಾತ್ರರಾದ ಶಾಸಕ ಆರಗ ಜ್ಞಾನೇಂದ್ರ - ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ
ಅಪಘಾತದಲ್ಲಿ ಗಾಯಾಗೊಂಡವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಣೆ: ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ಶಾಸಕ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡಿದ್ದರು. ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕರು ಗಾಯಾಳುಗಳನ್ನು ತಮ್ಮ ಕಾರಿನಲ್ಲಿ ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಅವರನ್ನು ಮಣಿಪಾಲ್ಗೆ ತೆರಳಲು ಮೂರು ಅಂಬ್ಯುಲೆನ್ಸ್ ವಾಹನ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಈ ಮಾನವೀಯತೆಯ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.