ಶಿವಮೊಗ್ಗ:ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮುಸ್ಲಿಂ ಸಮಾಜದ ವಿರುದ್ಧ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಿಲ್ಲೆಯಲ್ಲಿ ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆ ಪ್ರತಿಭಟನೆ ನಡೆಸಿದರು.
ಮುಸ್ಲಿಂ ಸಮುದಾಯದ ಕುರಿತು ವಿವಾದಿತ ಹೇಳಿಕೆ: ಶಾಸಕ ರೇಣುಕಾಚಾರ್ಯ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ - ಶಿವಮೊಗ್ಗ ಶಾಸಕ ರೇಣುಕಾಚಾರ್ಯ ವಿರುದ್ಧ ಪ್ರತಿಭಟನೆ
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮುಸ್ಲಿಂ ಸಮಾಜದ ವಿರುದ್ಧ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಿಲ್ಲೆಯಲ್ಲಿ ಸಿಟಿಜನ್ ಯುನೈಟೆಡ್ ಮೂಮೆಂಟ್ ಸಂಘಟನೆ ಪ್ರತಿಭಟನೆ ನಡೆಸಿದರು.
ನಗರದ ಮಹಾವೀರ ವೃತ್ತದಲ್ಲಿ ಸಿಟಿಜನ್ ಯುನೈಟೆಡ್ ಮೂಮೆಂಟ್ ಪ್ರತಿಭಟನೆ ನಡೆಸಿದ್ದು, ಶಾಸಕ ರೇಣುಕಾಚಾರ್ಯ ಮಂಗಳವಾರ ಹೊನ್ನಾಳಿಯಲ್ಲಿ ಮಾತನಾಡಿ ಮುಸ್ಲಿಮರು ಮಸೀದಿಯಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ.ನಿಮಗೆ ಪಾಕಿಸ್ತಾನದ ಹಣ ಬರುತ್ತಿದ್ದರೆ ಅದನ್ನು ಮಂಗಳೂರಿನ ಗೋಲಿಬಾರ್ನಲ್ಲಿ ಮೃತರಾದವರಿಗೆ ನೀಡಿ ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದರು.
ಇನ್ನು ಸಂವಿಧಾನ ಬದ್ಧವಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಶಾಸಕರಾಗಿ ಈಗ ಒಂದು ಸಮುದಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಇದರಿಂದ ರಾಜ್ಯಪಾಲರು ತಕ್ಷಣ ರೇಣುಕಾಚಾರ್ಯ ವಿರುದ್ಧ ಕ್ರಮ ತೆಗದುಕೊಂಡು ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.