ಶಿವಮೊಗ್ಗ: ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆಯನ್ನು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಾಗುತ್ತಿದೆ.
ಮೂಲಸೌಕರ್ಯಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ - shivmogga Karnataka Dalit Conflict Committee protest
ಮಹಾನಗರ ಪಾಲಿಕೆ ಹಕ್ಕಿಪಿಕ್ಕಿ ಜನಾಂಗದವರು ವಾಸಿಸುತ್ತಿರುವ ಪ್ರದೇಶವನ್ನು ಸ್ಲಂ ಎಂದು ಘೋಷಿಸಿ ಹಕ್ಕುಪತ್ರ ನೀಡಿ ಎಲ್ಲಾ ಮೂಲ ಸವಲತ್ತುಗಳನ್ನು ಒದಗಿಸಬೇಕು..
ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ
ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.6 ರ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿಪಿಕ್ಕಿ ಸಮುದಾಯದ 350 ಕ್ಕೂ ಹೆಚ್ಚು ಕುಟುಂಬಗಳಿಗೆ ಸರಿಯಾದ ಮೂಲಸೌಕರ್ಯಗಳು ಹಾಗೂ ವಿದ್ಯುತ್ ಸಂಪರ್ಕವನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮಹಾನಗರ ಪಾಲಿಕೆ ಹಕ್ಕಿಪಿಕ್ಕಿ ಜನಾಂಗದವರು ವಾಸಿಸುತ್ತಿರುವ ಪ್ರದೇಶವನ್ನು ಸ್ಲಂ ಎಂದು ಘೋಷಿಸಿ ಹಕ್ಕುಪತ್ರ ನೀಡಿ ಎಲ್ಲಾ ಮೂಲ ಸವಲತ್ತುಗಳನ್ನು ಒದಗಿಸಬೇಕು. ಇಲ್ಲವಾದ್ರೆ ಬೇಡಿಕೆ ಈಡೇರುವವರೆಗೂ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.