ಶಿವಮೊಗ್ಗ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಹಾಗೂ ದೆಹಲಿ ಜೆಎನ್ಯುನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಸಿಟಿಜನ್ ಯುನೈಟೆಡ್ ಮೂಮೆಂಟ್ ನೇತೃತ್ವದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪೌರತ್ವ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ - ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಹಾಗೂ ದೆಹಲಿ ಜೆಎನ್ಯುನಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಸಿಟಿಜನ್ ಯುನೈಟೆಡ್ ಮೂಮೆಂಟ್ ನೇತೃತ್ವದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ
ಶಿವಮೊಗ್ಗ ಬಸ್ ನಿಲ್ದಾಣದ ಎದುರಿನ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ, ಸಾಮಾಜಿಕ, ಜಾತ್ಯತೀತ, ಗಣರಾಜ್ಯ ತತ್ವಗಳನ್ನು ಆಧರಿಸಿ ಸಂವಿಧಾನ ರಚಿಸಲಾಗಿದೆ. ಇವುಗಳಲ್ಲಿ ಯಾವುದಾದರೂ ಒಂದು ಅಂಶಕ್ಕೆ ಹೊಡೆತ ಬಿದ್ದರೂ ದೇಶಕ್ಕೆ ಕಾಯಿಲೆ ಆವರಿಸಿದಂತಾಗುತ್ತದೆ. ಹೀಗಾಗಿ ಕೂಡಲೇ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಹಿಂಪಡೆಯಬೇಕು ಹಾಗೂ ಜೆಎನ್ಯು ವಿಶ್ವವಿದ್ಯಾಲಯದಲ್ಲಿನ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.